ಅಮೆರಿಕದ ಡ್ರೋನ್ ಹೊಡೆದುರುಳಿಸಿದ ಇರಾನ್ ಸೇನೆ

0
Us-Army-Iran-War

ಟೆಹರಾನ್: ಇರಾನ್ ಸೇನೆ ಅಮೆರಿಕದ ಡ್ರೋನ್‌ವೊಂದನ್ನು ಹೊಡೆದುರುಳಿಸಿದ್ದು, ಬಂದರ್ ಅಬ್ಬಾಸ್ ಬಂದರು ನಗರದ ಸಮೀಪ ಅದು ಪತನಗೊಂಡಿದೆ ಎಂದು ವರದಿಯಾಗಿದೆ. ಕಳೆದ ಕೆಲವು ತಿಂಗಳಲ್ಲಿ 54 ಅಮೆರಿಕದ ಡ್ರೋನ್‌ಗಳನ್ನು ತಡೆದಿರುವುದಾಗಿ ಇರಾನ್ ಹೇಳಿಕೊಂಡಿದೆ. ಈ ಹಿಂದೆ ಹಾರ್ಮುಜ್ ಜಲಸಂಧಿಯಲ್ಲಿಯೂ ಅಮೆರಿಕದ ಎಂQ-9 ರೀಪರ್ ಡ್ರೋನ್ ಹೊಡೆದುರುಳಿಸಿತ್ತು.

ಇದೇ ವೇಳೆ, ಇರಾನ್ ಒಪ್ಪಂದಕ್ಕೆ ಬರದಿದ್ದರೆ ಮತ್ತೊಂದು ಸುತ್ತಿನ ಸೇನಾ ಕಾರ್ಯಾಚರಣೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ‘ಎಪಿಕ್ ಫ್ಯೂರಿ’ ಹೆಸರಿನಲ್ಲಿ ಹೊಸ ದಾಳಿ ನಡೆಸುವ ಸಾಧ್ಯತೆಯನ್ನೂ ಅವರು ಪ್ರಸ್ತಾಪಿಸಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸುವುದನ್ನು ತಡೆಯಲು ಅಮೆರಿಕ ಒಪ್ಪಂದಕ್ಕೆ ಒತ್ತಡ ಹೇರುತ್ತಿದೆ.

ಅಮೆರಿಕದ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಇರಾನ್ ಸಂಚು ರೂಪಿಸುತ್ತಿರುವ ಬಗ್ಗೆ ಗುಪ್ತಚರ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಭದ್ರತಾ ಆತಂಕದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಿಂದ ರಾಜತಾಂತ್ರಿಕ ಸಿಬ್ಬಂದಿಯನ್ನು ಅಮೆರಿಕ ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದು, ಪ್ರದೇಶದ ಹಲವು ರಾಯಭಾರ ಕಚೇರಿಗಳಲ್ಲಿ ಸಿಬ್ಬಂದಿ ಕಡಿತಗೊಳಿಸುತ್ತಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *