ತೆಲಂಗಾಣ ಫೈಟ್‌ಗೆ ಭರ್ಜರಿ ತಯಾರಿ; ಚುನಾವಣೆ ಘೋಷಣೆಗೆ ಮುನ್ನವೇ BRS ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿರುವ ಬಿಆರ್‌ಎಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿಧಾನಸಭಾ ಚುನಾವಣೆಗೆ ಮುನ್ನವೇ 119 ಸ್ಥಾನಗಳ ಪೈಕಿ 115 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಆರ್‌ಎಸ್ ಪಕ್ಷದ ಅಧ್ಯಕ್ಷರೂ ಆದ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಪ್ರಕಟಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿರುವ ಅವರು, ಅಕ್ಟೋಬರ್ 16 ರಂದು ವಾರಂಗಲ್‌ನಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದರು. 119 ಸ್ಥಾನಗಳಲ್ಲಿ ತಮ್ಮ ಪಕ್ಷವು 95-105 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

You may have missed