ದಾವಣಗೆರೆ ಉನಾವಣೆ ನಂತರ ಕಾಂಗ್ರೆಸ್’ನಲ್ಲಿ ತಳಮಳ; ಜಬ್ಬಾರ್ ರಾಜೀನಾಮೆ ಅಂಗೀಕಾರ

0
congress flag.3

ಬೆಂಗಳೂರು: ದಾವಣಗೆರೆ ಕ್ಷೇತ್ರದ ಉಪಚುನಾವಣೆಯಲ್ಲಿ ನೀಡದ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಸೃಷ್ಟಿಸಿದೆ. ಅದರಲ್ಲೂ ಮುಸ್ಲಿಂ ನಾಯಕರು ಪಕ್ಷದ ಪ್ರಚಾರದಿಂದ ಉಳಿದಿರುವ ಬೆಳವಣಿಗೆ ಪಕ್ಷದ ವರಿಷ್ಠರಿಗೆ ಮುಜುಗರ ತಂದಿದೆ.

ಈ ಬೆಳವಣಿಗೆಯ ನಡುವೆಯೇ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ.

“ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ” ಎಂದು ಶಿವಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *