ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

ಹುಬ್ಬಳ್ಳಿ: ಬಡವರ ಅನ್ನಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಹುಬ್ಬಳ್ಳಿಯಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಅಡ್ಡೆಗೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದಾರೆ.
ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಸುಮಾರು 500 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ, ಟಾಟಾ ಏಸ್ ವಾಹನದಲ್ಲಿ ಲೋಡ್ ಮಾಡುತ್ತಿದ್ದ ವೇಳೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಅದಾಗಲೇ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.