ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಂಧಾನ

0
Truck-Lorry-transport

ಬೆಂಗಳೂರೂ: ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಅಹವಾಲನ್ನು ಆಲಿಸಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಆದರೆ ತಮ್ಮ ಬೇಡಿಕೆ ಈಡೇರಿಸದ ಹೊರತು ಮುಷ್ಕರ ಕೈಬಿಡಲ್ಲ ಎಂದು ಲಾರಿ ಮಾಲೀಕರು ತಿಳಿಸಿದ್ದಾರೆ.

ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅವರು ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು. ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ ಎಂದು ಮನವರಿಕೆ ಮಾಡಿದರು.

ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು ಎಂದವರು ಮನವಿ ಮಾಡಿದರು.

ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ ಎಂದು ತಿಳಿಸಿದ ಸಿದ್ದರಾಮಯ್ಯ, ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲೀಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಡನು ಭರವಸೆ ನೀಡಿದರು.

Leave a Reply

Your email address will not be published. Required fields are marked *

You may have missed