ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಕೇಂದ್ರ ನಕಾರ

ನವದೆಹಲಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ.ಶಿವಕುಮಾರ್ ಕನಸು ನುಚ್ಚು ನೂರಾಗಿದೆ. ಈ ಸಂಬಂಧದ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣ ಕುರಿತು ಪ್ರಸ್ತಾಪ ಮುಂದಿಟ್ಟಿದ್ದರು. ಡಿ.ಕೆ.ಶಿವಕುಮಾರ್ ಅವರ ಆಗ್ರಹ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.