ರಿಯಾದ್ ವಿಮಾನ ನಿಲ್ದಾಣದ ದಾಳಿಗೆ ಟ್ರಂಪ್, ಭಾರತದ ಖಂಡನೆ

0
Us-India-America-India-co-operation-1

ವಾಷಿಂಗ್ಟನ್/ನವದೆಹಲಿ: ಸೌದಿ ಅರೇಬಿಯಾದ ರಿಯಾದ್‌ನ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭೀಕರ’ ಎಂದು ಖಂಡಿಸಿದ್ದಾರೆ. ದಾಳಿಯಲ್ಲಿ ಅಮೆರಿಕದ ಪ್ರಜೆಯೂ ಸೇರಿದಂತೆ 12 ಮಂದಿ ಮೃತಪಟ್ಟಿದ್ದು, 309 ಮಂದಿ ಗಾಯಗೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಸೌದಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು. ಸೌದಿ ಅರೇಬಿಯಾದಲ್ಲಿ ನಡೆದಿರುವುದು ಸ್ವೀಕಾರಾರ್ಹವಲ್ಲ ಎಂದ ಅವರು, ಯೆಮನ್‌ನ ಹೌತಿ ಗುಂಪಿನೊಂದಿಗೆ ಅಮೆರಿಕ ಸಂಪರ್ಕ ಹೊಂದಿದೆ ಎಂದು ಹೇಳಿದರು.

ಇದೇ ವೇಳೆ, ದಾಳಿಯನ್ನು ಭಾರತವೂ ತೀವ್ರವಾಗಿ ಖಂಡಿಸಿದೆ. ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ; ಅವು ತಕ್ಷಣ ನಿಲ್ಲಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಸೌದಿ ಅರೇಬಿಯಾದ ಸಾರ್ವಭೌಮತ್ವದ ರಕ್ಷಣೆಯಲ್ಲಿ ಆ ದೇಶದ ಸರ್ಕಾರ ಮತ್ತು ಜನರೊಂದಿಗೆ ಭಾರತ ಒಗ್ಗಟ್ಟು ವ್ಯಕ್ತಪಡಿಸಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಭಾರತ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಹಾಗೂ ಪ್ರದೇಶದಲ್ಲಿ ಶಾಂತಿ ಮರಳಲಿ ಎಂದು ಆಶಿಸಿದೆ.

Leave a Reply

Your email address will not be published. Required fields are marked *