ರೈಲು ಅಪಹರಣ ಬೇಧಿಸಿದ ಸೇನೆ; 16 ಉಗ್ರರ ಹತ್ಯೆ, ನೂರಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ

0
Pakistan-Peshawar-blast-300x210-1-150x150

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ಧಮನ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ್ನು ವಶಕ್ಕೆ ಪಡೆದು ಅಪಹರಿಸಿದ್ದ ಉಗ್ರರು, ಸುಮಾರು 400 ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ಮಂಗಳವಾರ ಈ ರೈಲನ್ನು ಹಿಡಿತಕ್ಕೆ ತೆಗೆದುಕೊಂಡಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಈ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 104 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಸುದೀರ್ಘ ಕಾರ್ಯಚನೆಯಲ್ಲಿ ಸುಮಾರು 16 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಮತ್ತೊಂದು ರೈಲಿನ ಮೂಲಕ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಈ ನಡುವೆ, ಸುರಂಗವನ್ನು ಸುತ್ತುವರಿದಿರುವ ಸೇನಾಪಡೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದೆ.

Leave a Reply

Your email address will not be published. Required fields are marked *

You may have missed