ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

0
vidhana-soudha-300x167

ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಉನ್ನತ ಗೌರವ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಚಿತ್ರೋದ್ಯಮದ ಗಣ್ಯರು ಒತ್ತಾಯಿಸಿದ್ದಾರೆ.

ಮಂಗಳವಾರ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಅಲ್ಲದೇ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು, ಅವರು ವಾಸಿಸುತ್ತಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆ ಕೂಡ ಮನವಿ ಮಾಡಲಾಯಿತು.

Leave a Reply

Your email address will not be published. Required fields are marked *