ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ: ಡಿಕೆಶಿ
ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕ್ರ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ವಿಚಾರವನ್ನು ನಾವು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು ತಿಳಿಸಿದರು.
ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಉಸ್ತುವಾರಿಗಳು ನೋಡಿಕೊಳ್ಳುತ್ತಾರೆ ಎಂದು ಡಿಕೆಶಿ ತಿಳಿಸಿದರು.
ಸಚಿವರ ಕಾರ್ಯಗಳ ಬಗ್ಗೆ ವರದಿ ಸಲ್ಲಿಕೆ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಸಚಿವರ ಕಾರ್ಯಗಳ ವಿಚಾರವಾಗಿ ಮುಖ್ಯಮಂತ್ರಿಗಳು ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಎಐಸಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.