ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

0
afganistan-Kabul-2-750x392-1-300x157-1

ಕಾಬೂಲ್: ಪೂರ್ವ ಅಫ್ಘಾನಿಸ್ತಾನದ ಹಲವು ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ವಾಯುದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕರಾಚಿಯಲ್ಲಿರುವ ಅರೆಸೈನಿಕ ರೇಂಜರ್‌ಗಳ ಪ್ರಾದೇಶಿಕ ಕೇಂದ್ರದ ಮೇಲೆ ನಡೆದ ದಾಳಿಯಲ್ಲಿ ಮೂವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಕರಾಚಿ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್‌ನ ಬೇರ್ಪಟ್ಟ ಬಣವಾದ ಜಮಾತ್-ಉಲ್-ಅಹ್ರಾರ್ ಹೊತ್ತುಕೊಂಡಿದೆ. ಇದರ ಬೆನ್ನಲ್ಲೇ ಈ ದಾಳಿ ನಡೆದಿದೆ.

ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ಪಕ್ತಿಕಾ, ಪಕ್ತಿಯಾ ಮತ್ತು ಕುನಾರ್ ಪ್ರಾಂತ್ಯಗಳಲ್ಲಿನ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರ ಅಡಗುತಾಣಗಳು ಮತ್ತು ಸುರಕ್ಷಿತ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *