ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಮಂದಿ ಸಾವು

0
accident

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಾಯಗೊಂಡಿದ್ದಾರೆ.

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ವಿವಿಧ ದೇವಸ್ಥಾನಗಳಿಗೆ ಯಾತ್ರೆ ಹೊರಟಿದ್ದವರ ವಾಹನ ಅಪಘಾತಕ್ಕೀಡಾಗಿದೆ. 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed