‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ
ದೆಹಲಿ: ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿದ ಸಮನ್ಸ್ “ಅಕ್ರಮ ಮತ್ತು ರಾಜಕೀಯ ಪ್ರೇರಿತ” ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದನ್ನು ಬಿಜೆಪಿಯ ಒತ್ತಡದ ಮೇರೆಗೆ ಕಳುಹಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ತಮ್ಮ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ ಉದ್ದೇಶ ಇದರ ಹಿಂದಿದೆ ಎಂದು ಆರೋಪಿಸಿರುವ ಕೇಜ್ರಿವಾಲ್, ಸಮನ್ಸನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಈಗ ರದ್ದಾದ ಅಬಕಾರಿ ನೀತಿಯ ಬಗ್ಗೆ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗಲು ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಸೇರಿದಂತೆ ಹಲವು ಆಪ್ ನಾಯಕರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.