ಉತ್ತರ ಕರ್ನಾಟಕಕ್ಕೆ 3,000 ಕೋಟಿ ರೂ. ಪ್ರವಾಹ ಪರಿಹಾರ ಬಿಡುಗಡೆಗೆ ಪ್ರತಿಪಕ್ಷ ಆಗ್ರಹ

0
Bangalore rain effect- shivajinagar

ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕಕ್ಕೆ ಸರ್ಕಾರ 3,000 ಕೋಟಿ ರೂ. ಪ್ರವಾಹ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್‌ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರ ಅರ್ಧ ಕೆಜೆ ಅಕ್ಕಿಯೂ ಕೊಟ್ಟಿಲ್ಲ. ಬಿಜೆಪಿ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನು ಕೂಡ ಪ್ರವಾಸ ಮಾಡಿ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *