ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಮತದಾನ; ಆಯೋಗ ಸನ್ನದ್ಧ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದೆ. ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಮತ್ತು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಂಡಿದ್ದು, ಬುಧವಾರ ಮತದಾನ ನಡೆದಿದ್ದು ಚುನಾವಣಾ ಆಯೋಗ ಸಕಲ ತಯಾರಿ ಮಾಡಿಕೊಂಡಿದೆ.
ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.
- ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದಿಂದ ಸಿ.ಪಿ.ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ.
- ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಹುರಿಯಲಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಪಠಾಣ್ ಯಾಸೀರ್ ಅಹ್ಮದ್‌ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ.
- ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಇ.ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಹುರಿಯಾಳುಗಳು ಕಣದಲ್ಲಿದ್ದಾರೆ.