‘ಎಪ್‌ಸ್ಟೀನ್ ಫೈಲ್ಸ್ ಇಟ್ಟುಕೊಂಡು ಟ್ರಂಪ್ ಮೋದಿಗೆ ಹೆದರಿಸುತ್ತಿದ್ದಾರೆ’: ಖರ್ಗೆ ಟೀಕಾಸ್ತ್ರ

0
mallikarjun Kharge Belagavi

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮೂಲಕ ಆರ್ಟಿಕಲ್ 371 (ಜೆ) ಜಾರಿಗೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ. ಹಿಂದಿನ ಎನ್ ಡಿಎ ಸರ್ಕಾರದಲ್ಲಿ, ಅಂದಿನ ಗೃಹ ಸಚಿವ ಅಡ್ವಾಣಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಯುಪಿಎ-2 ಸರ್ಕಾರದಲ್ಲಿ ನಮ್ಮ ಪರವಾಗಿರಲು ಬೇರೆ ಬೇರೆ ಪಕ್ಷಗಳ 130 ಜನ ಎಂ.ಪಿಗಳಿಗೆ ಹೇಗೆ ಮನವೊಲಿಸಿದ್ದೇನೆ ಅನ್ನುವ ವಿಚಾರ ನನಗೆ ಮಾತ್ರ ತಿಳಿದಿದೆ ಎಂದವರು ಹೇಳಿದ್ದಾರೆ.

ಆರ್ಟಿಕಲ್ 371 (ಜೆ) ಮೂಲಕ ನನಗೆ,‌ ನನ್ನ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಅನುಕೂಲವಾಗಲ್ಲ. ಅದು ಅನುಕೂಲವಾಗುವುದು ನಮ್ಮ ಕಲ್ಯಣ ಕರ್ನಾಟಕ ಭಾಗದ ಜನಸಾಮಾನ್ಯರಿಗೆ. ಇಂದು ನಮ್ಮ ಭಾಗದ ಯುವಜನರಿಗೆ ಮೆಡಿಕಲ್, ಇಂಜಿನಿಯರಿಂಗ್ ಸೀಟು ಪಡೆದುಕೊಳ್ಳಲು ಅನುಕೂಲವಾಗಿದೆ ಎಂದಿದ್ದಾರೆ.

ನಮ್ಮ ದೇಶದ ಯುವಕರ ಭವಿಷ್ಯ ಉಜ್ವಲವಾಗಬೇಕಾದರೆ ಜನಪರ ಯೋಜನೆಗಳು ಜಾರಿಯಾಗಬೇಕು. ಆದರೆ ಬಿಜೆಪಿಯವರು ಯುವಕರಲ್ಲಿ ಜಗಳ ಹಚ್ಚುವುದು ಹಾಗೂ ದ್ವೇಷ ಹರಡುವುದೇ‌ ಕೆಲಸವಾಗಿದೆ. ಶ್ರೀಮಂತರು ಹೇಗೋ ಬಚಾವಾಗುತ್ತಾರೆ, ಬಡವರು ಎಲ್ಲಿ ಹೋಗಬೇಕು? ಎಂದು ಅವ್ರು ಪ್ರಶ್ನಿಸಿದ್ದಾರೆ.

ಬಿಜೆಪಿ ಹಾಗೂ ಆರೆಸ್ಸೆಸ್’ನ ಕೆಲವರು ಬ್ರಿಟಿಷ್‌ ರ ಕೆಳಗೆ ಕೆಲಸ ಮಾಡುತ್ತಿದ್ದವರು. ಅವರು‌ ದೇಶದ ಸ್ವಾತಂತ್ರ್ಯಕ್ಕಾಗಿ ಹನಿ‌ ರಕ್ತ ಹರಿಸಿಲ್ಲ. ಬಿಜೆಪಿ ಹಾಗೂ ಆರೆಸ್ಸೆಸ್ ನವರ ಬಗ್ಗೆ ಪ್ರತಿಯೊಬ್ಬರೂ ಎಚ್ಚರದಿಂದ ಇರಬೇಕು ಅವರ ಮಾತಿಗೆ ಮರುಳಾಗಬಾರದು ಎಂದ ಖರ್ಗೆ, ‘ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೇರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

ಜವಾಹರ್ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ‘ನಾನ್ ಅಲೈನ್ ಮೆಂಟ್’ ಸಿದ್ಧಾಂತ ಅಳವಡಿಸಿಕೊಂಡಿದ್ದು ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್ ಗೆ ಹೋಗಿ ಬಂದ‌ ನಂತರ ಅದು ಇರಾನ್ ಮೇಲೆ‌ ಬಾಂಬ್ ಹಾಕಿತು. ಇರಾನ್ ದೇಶದ ಮಖ್ಯಸ್ಥ ಖಮೇನಿಯವರನ್ನು ಅಮೆರಿಕದವರು ಹತ್ಯೆ ಮಾಡಿದರು.‌ ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿದರೆ ಆ ದೇಶ ಶಾಂತಿಯಿಂದ ಇರುತ್ತದಯೇ? ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯವಾಗುತ್ತದೆಯಾ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಭಾರತ ದೇಶದ 65% ರೈತರು ಕೃಷಿ ಅವಲಂಬಿತರಾಗಿದ್ದರೆ ಅಮೇರಿಕಾದ ದಲ್ಲಿ 3% ಅವಲಂವಿತರಾಗಿದ್ದಾರೆ. ನಮ್ಮ ದೇಶದ ಉತ್ಪನ್ನಗಳಿಗೆ ಅಮೇರಿಕಾದಲ್ಲಿ ಮನಬಂದಂತೆ ತೆರಿಗೆ ಹಾಕಲಾಗುತ್ತಿದೆ. ಆದರೆ, ಅಮೇರಿಕಾದ ಉತ್ಪನ್ನಗಳ ಮೇಲೆ ಯಾವುದೇ ಕೃತೆರಿಗೆಯನ್ನು ಭಾರತ ಹೇರುತ್ತಿಲ್ಲ. ಮೋದಿಯವರು ಟ್ರಂಪ್ ನನ್ನ ಸ್ನೇಹಿತ ಎನ್ನುತ್ತಾರೆ. ಆದರೆ, ರಷ್ಯಾದಿಂದ ತೈಲ ಖರೀದಿ ಮಾಡದರೆ ನಿಮ್ಮ ಮೇಲೆ ಟ್ಯಾಕ್ಸ್ ಹಾಕುತ್ತೇನೆ ಟ್ರಂಪ್ ಹೇಳುತ್ತಾರೆ ಎಂದ ಖರ್ಗೆ, ಟ್ರಂಪ್ ಜೊತೆ ದಿನಾಲೂ ಮಾತನಾಡುತ್ತಿರುವುದಾಗಿ ಮೋದಿ ಹೇಳುತ್ತಾರೆ. ತೆರಿಗೆ ಹಾಕುವ ಬಗ್ಗೆನೆ ಮಾತನಾಡುತ್ತಾರ? ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಗೆ ಹೆದರಿಸುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *