ಎಲ್ಲೆಲ್ಲೂ ನಕಲಿ ಕಲಬೆರಕೆ ಪನೀರ್ ಹಾವಳಿ.. ಅರೋಗ್ಯ ಸಚಿವ ಜೆ.ಪಿ.ನಡ್ಡಾಗೆ ಜೋಶಿ ಪತ್ರ

0
Paneer-Ghee-Roast

ನವದೆಹಲಿ: ದೇಶಾದ್ಯಂತ ನಕಲಿ ನಕಲಿ ಮತ್ತು ಕಲಬೆರಕೆ ಪನೀರ್ ಹಾವಳಿ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಅರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ.

ದೇಶಾದ್ಯಂತ ಫಾಸ್ಟ್ ಫುಡ್ ಜಾಯಿಂಟ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ಮಾರುಕಟ್ಟೆಗಳಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಪ್ರಕರಣಗಳು ಹೆಚ್ಚುತ್ತಿವೆ. ಈ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮತ್ತು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ದೂರುಗಳನ್ನು ಹೆಚ್ಚಿಸಲು ಕಾರಣವಾಗಿವೆ ಎಂದು ಸಚಿವ ಪ್ರಲ್ಹಾದ್ ಜೋಶಿಯ ಆ ಪತ್ರದಲ್ಲಿ ಗಮನಸೆಳೆದಿದ್ದಾರೆ.
ಈ ಸಂಬಂಧ ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಪೋರ್ಟಲ್‌ನಲ್ಲಿ ಹಲವಾರು ದೂರುಗಳನ್ನು ದಾಖಲಿಸಿದ್ದಾರೆ. ಇದು ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ/ಬಳಕೆಯ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ನಕಲಿ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಸೇವನೆಯು ತೀವ್ರ ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಪ್ರಲ್ಹಾದ್ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ.

ಆಹಾರ ಸುರಕ್ಷತಾ ಮಾನದಂಡಗಳ ವಿಷಯವು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006 ರಿಂದ ನಿಯಂತ್ರಿಸಲ್ಪಡುವುದರಿಂದ, ದೇಶಾದ್ಯಂತ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಅರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed