ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

0
IPL - Punjab Kings

ದೆಹಲಿ: ಐಪಿಎಲ್ 2026ರಲ್ಲಿ ಶನಿವಾರ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದೆ. ಭಾರೀ ಚೇಸ್ ಮೂಲಕ ಪಂಜಾಬ್ ಕಿಂಗ್ಸ್ ತಂಡ ತನ್ನ ಶಕ್ತಿ ತೋರಿಸಿದ್ದು, ಐಪಿಎಲ್ 2026ರಲ್ಲಿ ಬಲಿಷ್ಠ ಪೈಪೋಟಿದಾರಿಯಾಗಿ ಹೊರಹೊಮ್ಮಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ (Arun Jaitley Stadium)ದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ, ಕೆಎಲ್ ರಾಹುಲ್ (KL Rahul) ಅವರ ಅಜೇಯ 152 ರನ್‌ಗಳ ನೆರವಿನಿಂದ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಭಾರೀ ಮೊತ್ತ ಕಲೆಹಾಕಿತು.

265 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಪಂಜಾಬ್ ತಂಡಕ್ಕೆ ಆರಂಭದಲ್ಲೇ ಪ್ರಭ್ಸಿಮ್ರನ್ ಸಿಂಗ್ (Prabhsimran Singh) ಮತ್ತು ಪ್ರಿಯಾಂಶ್ (Priyansh) ಜೋಡಿ ಕೇವಲ 6.5 ಓವರ್‌ಗಳಲ್ಲಿ 126 ರನ್‌ಗಳ ಸ್ಫೋಟಕ ಜೊತೆಯಾಟ ನೀಡಿ ಭರ್ಜರಿ ಅಡಿಪಾಯ ಹಾಕಿದರು.

ನಂತರ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಜವಾಬ್ದಾರಿಯುತ ಆಟದೊಂದಿಗೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಿಬಿಕೆಎಸ್ ತಂಡ ಇನ್ನೂ 7 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿತು.

ಈ ಜಯದೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಟೂರ್ನಿಯಲ್ಲಿ ಅಜೇಯವಾಗಿ ಉಳಿದಿದೆ. ಆಡಿದ 7 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Leave a Reply

Your email address will not be published. Required fields are marked *