ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಮಚಂದ್ರ ರಾವ್ ಅವರಿಗೆ ಭಡ್ತಿ

ips police cap

ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇಬ್ಬರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದು, ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಡಿಜಿಪಿ ಹುದ್ದೆಗೆ ಭಡ್ತಿ ನೀಡಿ ಪೊಲೀಸ್ ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

You may have missed