ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

0
udupi rain1

ಕಾರವಾರ: ರಾಜ್ಯ ಕರಾವಳಿ ಮಲೆನಾಡಲ್ಲಿ ಮಳೆ ಭಾರೀ ಮಳೆಯಾಗುತ್ತಿದ್ದು, ಹಲವು ಅನಾಹುತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಬಂಧಿ ಘಟನೆಗಳಲ್ಲಿ ಮೂವರು ಬಲಿಯಾಗಿದ್ದಾರೆ. ಈ ಪೈಕಿ ಎರಡು ವರ್ಷದ ಮಗು ಚರಂಡಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಚ್ಚಿ ಬೀಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಉತ್ತರಕನ್ನಡ ಜಿಲ್ಲೆಯಲ್ಲಿ ಸರಣಿ ಸಾವಿನ ಘಟನೆಗಳು ಸಂಭವಿಸಿವೆ. ಶನಿವಾರ ಸಂಜೆಯಿಂದ ಸುರಿಯುತ್ತಿರುವ ಭೂಕುಸಿತ, ಮನೆ ಕುಸಿತ ಸೇರಿದಂತೆ ಸರಣಿ ದುರ್ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದೇ ಸಂದರ್ಭದಲ್ಲಿ ಭಟ್ಕಳ ಬಳಿ ಆಜಾದ್ ನಗರದಲ್ಲಿ ಎರಡು ವರ್ಷದ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *