ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

udupi katapadi junction2

ಕಟಪಾಡಿ ಜಂಕ್ಷನ್.. ಚಿತ್ರಗಳು: ಮನು ಅಮೀನ್ ಮೂಲೂರು

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆವರೆಗಿನ ಮಳೆಯಾಗುವ ಸಾಧ್ಯತೆಗಳಿವೆ.

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಒಳನಾಡಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ ಎಂದು ಮುನ್ಸೂಚನೆ ವ್ಯಕ್ತವಾಗಿದೆ.

ಮುಂಗಾರು ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗಿದ್ದು ಸೆಪ್ಟೆಂಬರ್ 12ರ ನಂತರ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.