ಕಲಮಸ್ಸೆರಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ

blast inside a Christian Convention Centre in Ernakulam Kerala

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಸಂಭವಿಸಿರುವ ಸರಣಿ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಭಾನುವಾರ ಬೆಳಿಗ್ಗೆ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಕಾರ್ಯಕ್ರಮ ಸಂದರ್ಭದಲ್ಲಿ ಸರಣಿ ಸ್ಫೋಟ ಸಂಭವಿಸಿತ್ತು. ಓರ್ವ ಮಹಿಳೆ ಸಾವನ್ನಪ್ಪಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದ ಗಾಯಾಳುಗಳ ಪೈಕಿ ಮತ್ತಿಬ್ಬರು ಚಿಜಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸರಣಿ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಈ ನಡುವೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಪೈಕಿ ಹಲವರ ಸ್ತಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಕಲಮಸ್ಸೆರಿಯ ಸರಣಿ ಸ್ಫೋಟದ ನಂತರ ಕೇರಳ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.