ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

0
Chandrashekar Siddi

ಕಾರವಾರ: ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ನಟ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಚಂದ್ರಶೇಖರ್ ಸಿದ್ದಿ ಗುರುವಾರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಸಮೀಪದ ವಜ್ರಳ್ಳಿ ಗ್ರಾಮದ ಚಿಮನಳ್ಳಿಮೂಲದ ಚಂದ್ರಶೇಖರ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಪತಿ ಮನೆಗೆ ಬಾರದಿದ್ದಾಗ, ಪತ್ನಿ ಹುಡುಕಾಡಿದ್ದು, ಆವೇಳೆ ಆತ್ಮಹತ್ಯೆ ವಿಚಾರ ಗೊತ್ತಾಯಿತು ಎನ್ನಲಾಗಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎನ್ನಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed