‘ಕೆರೆಬೇಟೆ’ ಖ್ಯಾತಿಯ ಗೌರಿಶಂಕರ್ ‘ಕಾಮನ್ ಮ್ಯಾನ್’; ಟ್ರೇಲರ್ ಬಿಡುಗಡೆ

0
Common-Man-movie-Gowrishankar-Srg

ಬೆಂಗಳೂರು: ಡಾ. ಎನ್. ನರಸಿಂಹ ಮೂರ್ತಿ ಕಥೆ ಬರೆದು, ‘ಸುರಭಿ ಫಿಲ್ಮ್ಸ್’ ಬ್ಯಾನರ್‌ನಲ್ಲಿ ನಿರ್ಮಿಸಿರುವ ‘ಕಾಮನ್ ಮ್ಯಾನ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಕೌಟುಂಬಿಕ ಕಥಾಹಂದರದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇದು ಅವರ ನಿರ್ದೇಶನದ 106ನೇ ಸಿನಿಮಾ ಎಂಬ ವಿಶೇಷತೆ ಹೊಂದಿದೆ.

‘ಕೆರೆಬೇಟೆ’ ಖ್ಯಾತಿಯ ಗೌರಿಶಂಕರ್ ‘ಕಾಮನ್ ಮ್ಯಾನ್’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದು, ಸೋನಾ ಲದ್ವಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಕೌಟುಂಬಿಕ ಹಿನ್ನೆಲೆಯ ಕಥೆಯನ್ನು ಹೊಂದಿರುವ ಚಿತ್ರದಲ್ಲಿ ಸಾಮಾನ್ಯ ವ್ಯಕ್ತಿಯ ಬದುಕು, ಆತನ ಸುತ್ತಲಿನ ಘಟನೆಗಳು ಹಾಗೂ ಸಂಬಂಧಗಳ ವಿವಿಧ ಆಯಾಮಗಳನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ.

ಚಿತ್ರದ ಟ್ರೇಲರ್‌ನ್ನು ಸಂಗೀತ ನಿರ್ದೇಶಕ ಹಾಗೂ ಗೀತರಚನೆಕಾರ ವಿ. ಮನೋಹರ್ ಬಿಡುಗಡೆ ಮಾಡಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು, ಸಿನಿಮಾದ ಕುರಿತು ಮಾಹಿತಿ ಹಂಚಿಕೊಂಡರು.

‘ಕಾಮನ್ ಮ್ಯಾನ್’ ಚಿತ್ರದ ಮೂಲಕ ನಿರ್ದೇಶಕ ಓಂ ಸಾಯಿ ಪ್ರಕಾಶ್ ಮತ್ತೊಂದು ವಿಭಿನ್ನ ಕೌಟುಂಬಿಕ ಕಥೆಯನ್ನು ಪ್ರೇಕ್ಷಕರ ಮುಂದಿಡಲು ಸಜ್ಜಾಗಿದ್ದಾರೆ.

Leave a Reply

Your email address will not be published. Required fields are marked *