ಕೇಂದ್ರದ ನಿರ್ದೇಶನದಂತೆ ವಸತಿ ಯೋಜನೆಗಳಲ್ಲಿ ಅಲ್ಪಾಸಾಂಖ್ಯಾತರಿಗೆ ಮೀಸಲಾತಿ?

0
Siddaramaiah

ಬೆಂಗಳೂರು: ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಗಳಲ್ಲಿ ಮೀಸಲಾತಿಯನ್ನು ಶೇಕಡಾ 10ರಿಂದ 15ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೊಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯ ಮೇರೆಗೆ ಕೈಗೊಳ್ಳಲಾದ ಕ್ರಮವೆಂದು ಸ್ಪಷ್ಟಪಡಿಸಿದ್ದಾರೆ.

“2019ರಲ್ಲಿ ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರ ಪ್ರಕಟಿಸಿದ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮದಡಿ ಈ ಮಾರ್ಗಸೂಚಿ ಜಾರಿಗೆ ಬಂದಿದೆ. ಇದರಂತೆ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳು ಅಲ್ಪಸಂಖ್ಯಾತರಿಗೆ ಶೇ.15 ರಷ್ಟು ಮೀಸಲಾತಿ ನೀಡಬೇಕು ಎಂದು ಸ್ಪಷ್ಟವಾಗಿದೆ,” ಎಂದು ಸಿಎಂ ಹೇಳಿದ್ದಾರೆ.

ಈ ಮಾರ್ಗಸೂಚಿ ಹಿಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ರೂಪಿಸಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. “ಇದು ಅಸಂವಿಧಾನಿಕವಾಗಿದ್ದರೆ, ಕೇಂದ್ರವೇ ಎಲ್ಲ ರಾಜ್ಯಗಳಿಗೆ ಅನುಸರಿಸಬೇಕು ಎಂದು ಹೇಳಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಹಲವಾರು ಕೇಂದ್ರ ಯೋಜನೆಗಳಲ್ಲಿ ಈ ಮೀಸಲಾತಿ ಜಾರಿಗೆ ತರಲಾಗುತ್ತಿದೆ ಎಂಬುದನ್ನು ನೆನೆಪಿಸಿದ ಸಿಎಂ, ಬಿಜೆಪಿ ನಾಯಕರ ನಿಷೇಧಾತ್ಮಕ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *