‘ಕೈ’ ಹಿಡಿದ ಮಾಜಿ ಸಂಸದ ಅಯನೂರು ಮಂಜುನಾಥ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಗರಡಿಯಲ್ಲಿ ಪಳಗಿರುವ ಮತ್ತೊಬ್ಬ ನಾಯಕ ಇದೀಗ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಹೈಕಮಾಂಡ್ ಬಗ್ಗೆ ಮುಗಿಸಿಕೊಂಡು ಬಿಜೆಪಿಗೆ ಗುಡ್‌ಬೈ ಹೇಳಿ ಕೆಲ ಸಮಯದ ಹಿಂದಷ್ಟೇ ಜೆಡಿಎಸ್ ಸೇರಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರ ಜೊತೆಗೆ ಶಿಕಾರಿಪುರದ ನಾಗರಾಜ್ ಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಈ ನಾಯಕರನ್ನು ಕಾಂಗ್ರೆಸ್‌ಗೆ ಬರಾಡಿಕೊಂಡರು.‌ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.