ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ದುರಂತ: 17 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

0
DElhi-Ambulence-2-1

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಯ ಸಂಭ್ರಮದ ನಡುವೆ ದುರಂತ ಸಂಭವಿಸಿದ್ದು, ಮಧ್ಯ ಕೋಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪೆಂಡಾಲ್‌ನಲ್ಲಿ ಸಂಭವಿಸಿದ ಅವಘಡದಲ್ಲಿ 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ.

ಅಕ್ಟೋಬರ್ 17ರ ಶನಿವಾರ ಸಂಜೆ ದುರ್ಗಾ ಪೂಜೆಯ ಏಳನೇ ದಿನದಂದು ಈ ಘಟನೆ ಸಂಭವಿಸಿದೆ. ಸಂಜೆ ಸುಮಾರು 7.30ರ ವೇಳೆಗೆ ಪೆಂಡಾಲ್‌ನಲ್ಲಿ ಭಾರೀ ಜನದಟ್ಟಣೆ ಉಂಟಾಗಿದ್ದ ಸಂದರ್ಭದಲ್ಲಿ ಅದರ ಒಂದು ಭಾಗ ಕುಸಿದುಬಿದ್ದಿದೆ ಎಂದು ವರದಿಗಳು ತಿಳಿಸಿವೆ. ಇದೇ ವೇಳೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿತ್ತು.

ಪೆಂಡಾಲ್ ಕುಸಿಯುತ್ತಿದ್ದಂತೆ ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದ್ದು, ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವು ಒದಗಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ದುರಂತದ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ಪೆಂಡಾಲ್ ಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

Leave a Reply

Your email address will not be published. Required fields are marked *

You may have missed