ಖ್ಯಾತ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ

ಖ್ಯಾತ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ (83) ವಿಧಿವಶರಾಗಿದ್ದಾರೆ.ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗಿನ ಜಾವ ಹೈದರಾಬಾದ್ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು.
ಶ್ರೀನಿವಾಸ ರಾವ್ ಅವರು 1942ರ ಜುಲೈ 10ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. ಶಾಲಾ ದಿನಗಳಲ್ಲಿ ನಾಟಕಗಳಲ್ಲಿ ಕಾಣಿಸಿಕೊಂಡ ನಂತರ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡು ನಟನೆಯನ್ನು ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡರು. ತೆಲುಗು ಮಾತ್ರವಲ್ಲದೇ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕೂಡ ಕೋಟ ಶ್ರೀನಿವಾಸ ರಾವ್ ಅವರು ನಟಿಸಿದ್ದರು. ಕನ್ನಡದ ಲೇಡಿ ಕಮಿಷನರ್, ರಕ್ತ ಕಣ್ಣೀರು, ಲವ್, ನಮ್ಮ ಬಸವ, ನಮ್ಮಣ್ಣ, ಶ್ರೀಮತಿ, ಕಬ್ಜಾ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.
ಕಳೆದ 4 ದಶಕಗಳ ತಮ್ಮ ವೃತ್ತಿಜೀವನದಲ್ಲಿ ಕೋಟ ಶ್ರೀನಿವಾಸ ರಾವ್ ಅನೇಕ ಬಗೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ವಿಲನ್ ಪಾತ್ರ, ಹಾಸ್ಯ ಪಾತ್ರ ಸೇರಿದಂತೆ ಹಲವು ಬಗೆಯಲ್ಲಿ ಅವರು ಜನರನ್ನು ರಂಜಿಸಿದ್ದರು.
1999ರಿಂದ 2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.