ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಬೆಂಗಳೂರು: ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪೈಕಿ ಯಾವ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಕಾಂಗ್ರೆಸ್ ರಣತಂತ್ರಕ್ಕೆ ಪ್ರತಿಯಾಗಿ ಜೆಡಿಎಸ್-ಬಿಜೆಪಿ ಕ್ಷೇತ್ರಗಳ ಅದಲು ಬದಲು ಸೂತ್ರಕ್ಕೆ ಮುಂದಾದಂತಿದೆ.

ಚನ್ನಪಟ್ಟಣದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಮತ್ತೊಮ್ಮೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ದತೆ ನಡೆಸುತ್ತಿದೆ. ಈ ವಿಚಾರದಲ್ಲಿ ಬಂದ ಜೆಪಿ-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ.

ಇದೇ ವೇಳೆ, ಬೆಂಗಳೂರಿನಲ್ಲಿ ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಹಲವು ನಾಯಕರು ತಮ್ಮ ಅಭಿಪ್ರಾಯಗಳನ್ನು ಸಭೆಯ ಮುಂದಿಟ್ಟರು.

ಸಂಡೂರನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಬಿಜೆಪಿಗೆ ಕೇಳಲು ಸಲಹೆ ವ್ಯಕ್ತವಾಯಿತೆನ್ನಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿ, ಜೆಡಿಎಸ್‌ ಮನವೊಲಿಸಲು ಕಾರ್ಯತಂತ್ರ ರೂಪಿಸಲಾಯಿತು ಎನ್ನಲಾಗಿದೆ.

You may have missed