ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ; 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

0

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಇಂದು ನಡೆಯುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಮೂರು ಕ್ಷೇತ್ರಗಳಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಸಿ.ಪಿ.ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಹುರಿಯಲಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಪಠಾಣ್ ಯಾಸೀರ್ ಅಹ್ಮದ್‌ಖಾನ್‌ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಇ.ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಹುರಿಯಾಳುಗಳು ಕಣದಲ್ಲಿದ್ದಾರೆ.

Leave a Reply

Your email address will not be published. Required fields are marked *

You may have missed