ಜಮ್ಮು ಕಾಶ್ಮೀರ: ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ.
90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ.
ಇದೇ ವೇಳೆ, ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಘೋಷಣೆ ಮಾಡಿದ್ದಾರೆ. ತನ್ನ ಮಗ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಪ್ರಕಟಿಸಿದ್ದಾರೆ.