ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ; ವಿಜಯೇಂದ್ರ ಸ್ಪಷ್ಟನೆ

0
bjp flag1

ಬೆಂಗಳೂರು: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸಂಸದ ಡಾ.ಸುಧಾಕರ್ ಮಾಡಿರುವ ಆರೋಪಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಲ್ಲಗಳೆದಿದ್ದಾರೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುಧಾಕರ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, 23 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ವಿರೋಧ ವಿಚಾರವಾಗಿ ಕೆಲವರ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಲ್ಲ. ಆದರೆ ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ನನ್ನ ಯಾವುದೇ ಪಾತ್ರ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಹೈಕಮಾಂಡ್ ಚುನಾವಣೆಯ ಜವಾಬ್ದಾರಿ ಕೊಟ್ಟಿದ್ದು, 13 ವೀಕ್ಷಕರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ರಾಜ್ಯದ ಅಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಚುನಾವಣೆ ಸಂಬಂಧ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ ಎಂದು ವಿಜಯೇಂದ್ರ ವಿವರಿಸಿದರು.

Leave a Reply

Your email address will not be published. Required fields are marked *

You may have missed