ಜೆಡಿಎಸ್ – ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿ;  ಹೆಚ್ಡಿಕೆ 

ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದ್ದು, ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ, ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿಗೆ ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದ್ದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ, ಈ ಸರಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರಕಾರದ ವಿರುದ್ಧ ಸಂಘಟಿವಾಗಿ ಹೋರಾಟ ನಡೆಸಬೇಕಿದೆ ಎಂದರು ಕುಮಾರಸ್ವಾಮಿ ಅವರು.

ಮೈತ್ರಿಯ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ. ರಾಜ್ಯದ ಹಿತದೃಷ್ಟಿಯಿಂದ ಈ ರೀತಿಯ ಕೆಲವು ತೀರ್ಮಾನವಾಗುತ್ತದೆ. ಕೆಲದಿನ ಕಾದು ನೋಡಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. ಕೆಲವರು ಸಿದ್ದಾಂತಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮುಂದೆ ಮಾತಡೋಣ. ಇನ್ನು ಮೈತ್ರಿ ವಿಷಯಕ್ಕೆ ಬಂದರೆ, ಅದಕ್ಕೆ ಇನ್ನೂ ಸಮಯ ಇದೆ. ಇನ್ನು ಹಲವಾರು ವಿಚಾರಗಳ ಬಗ್ಗೆ ಚರ್ಚೆ ಆಗಬೇಕಿದೆ. ಇಲ್ಲಿ ಪರಸ್ಪರ ಕೊಟ್ಟು ತೆಗೆದುಕೊಳ್ಳುವುದಲ್ಲ.. ವಿಶ್ವಾಸ, ಗೌರವ ಮುಖ್ಯ ಎಂದು ಅವರು ಹೇಳಿದರು.

You may have missed