ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್

0
chinnaswamy stadium Bengaluru

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನಲ್ಲಿ ಮೂರನೇ ಬಾರಿಗೆ ಸೋಲು ಉಂಟಾಗಿದೆ. ಐಪಿಎಲ್ ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ ವಿಳಂಬವಾಯಿತು. ತಡವಾಗಿ ಆರಂಭವಾದ ಪಂದ್ಯವನ್ನು 14 ಓವರ್ ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದು ಕೊಂಡಿತು. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಓವರುಗಳಲ್ಲಿ 9 ವಿಕೆಟ್‌ಗೆ 95 ರನ್ ಗಳಿಸಿತು. 26 ಎಸೆತಗಳಲ್ಲಿ 50 ರನ್ ಗಳಿಸಿದ ಡೇವಿಡ್ ಅರ್ಧಶತಕ ಬಾರಿಸಿ ಆರ್‌ಸಿಬಿ ತಂಡವನ್ನು 95 ರನ್ ಮೊತ್ತಕ್ಕೆ ಕೊಂಡೊಯ್ದರು.

96 ರನ್ ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 13 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಭಾರಿಸಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಗೆಲುವು ಪಡೆದು ಪಂಜಾಬ್ ಕಿಂಗ್ಸ್ 2ನೇ ಸ್ಥಾನಕ್ಕೇರಿತು.

Leave a Reply

Your email address will not be published. Required fields are marked *