ದೇವನಹಳ್ಳಿ: ಹಳೇ ದ್ವೇಷದ ಹಿನ್ನೆಲೆ ಸೆಕ್ಯುರಿಟಿ ಗಾರ್ಡ್ ಬರ್ಬರ ಕೊಲೆ

0
police night3

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನ ಬರ್ಭರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ. ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಘರ್ಷಣೆ ನಡೆಯುತ್ತಿತ್ತು ಎನ್ನಲಾಗಿದೆ‌. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.

ಗೋವಿಂದ್ ಗ್ಯಾಂಗ್ ಗುರುವಾತ ರಾತ್ರಿ ಸೆಕ್ಯೂರಿಟಿ ಗಾರ್ಡ್ ಕೆಲಸ‌ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ‌ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ರಾತ್ರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿರುವ ವಿಶ್ವನಾಥಪುರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *