ಧಾರ್ಮಿಕ ಆಚರಣೆಗಳಿಗೆ ವಕ್ಫ್ ತಿದ್ದುಪಡಿ ಮಸೂದೆ ಅಡ್ಡಿಯಾಗದು: ದೇವೇಗೌಡ

0
HDD - Devegowda

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸ್ವಾಗತಿಸಿದ್ದಾರೆ. ಈ ಮಸೂದೆಯಿಂದ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಜ್ಯಸಭೆಯಲ್ಲಿ ನೂತನ ವಕ್ಫ್ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ದೇವೇಗೌಡರು, ಈ ಕಾಯ್ದೆ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ ಎಂದರು.

ವಕ್ಫ್ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ದೇಶದ ಸುಮಾರು 9.4 ಲಕ್ಷ ಎಕರೆಗಳಷ್ಟು ವಿಸ್ತಾರವಾಗಿರುವ 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ. 1.2 ಲಕ್ಷ ಕೋಟಿ ರೂ. ಮೌಲ್ಯದ ಈ ಆಸ್ತಿಗಳನ್ನು ಸ್ವತ್ತು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಮಸೂದೆಯಿಂದಾಗಿ ವಕ್ಫ್ ಆಸ್ತಿಗಳು ಶ್ರೀಮಂತರಿಂದ ಬಡ ಮುಸ್ಲಿಮರನ್ನು ರಕ್ಷಿಸುತ್ತದೆ ಎಂದು ದೇವೇಗೌಡರು ಪ್ರತಿಪಾದಿಸಿದ್ದಾರೆ.

Leave a Reply

Your email address will not be published. Required fields are marked *

You may have missed