ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ
ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸಲ್ಮಾನ್ ಖಾನ್ ನಟನೆಯ ಸಿಖಂದರ್ ಸಿನಿಮಾದ ಶೂಟಿಂಗ್‌ಗೆ ತಯಾರಿ ನಡೆಸುವ ನಡುವೆ ಜಿಮ್‌ನಲ್ಲಿ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಎಡವಟ್ಟಾಗಿ ನಟಿಗೆ ಗಾಯಗಳಾಗಿವೆ ಎನ್ನಲಾಗಿದೆ. ಆದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಟಿ ರಶ್ಮಿಕಾ ಅವರಿಗೆ ಕೆಲ ದಿನಗಳವರೆಗೆ ವಿಶ್ರಾಂತಿ ಅಗತ್ಯವಿದ್ದು, ‘ಸಿಖಂದರ್’ ಚಿತ್ರದ ಶೂಟಿಂಗ್’ನಿಂದಲೂ ಅವರು ದೂರ ಉಳಿಯಬೇಕಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.