ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ.
ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ಜಮಾಯಿಸಿದ್ದರು. ವಿಶೇಷ ರೈಲಿನ್ನು ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ ಎನ್ನಲಾಗಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.