ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು!

0
Priyank Kharge

ಬೆಂಗಳೂರು: ರಾಜ್ಯದಲ್ಲಿ RSS ನಿಷೇಧಿಸಲು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿರುವ ಬೆಳವಣಿಗೆ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ.

ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ, ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ, ಬಂದ್ ಮಾಡುತ್ತಿದ್ದಾರೆ ಎಂದು ಅಶೋಕ್ ಗಮನ ಸೆಳೆದಿದ್ದಾರೆ.

ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ಎಸ್ ಬಗ್ಗೆ ಸಿಎಂಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅಶೋಕ್, ‘ಆರ್ ಎಸ್ಎಸ್ ನಿಷೇಧ ಮಾಡುವ ಗೀಳು ಬಿಡಿ. ಈ ಕೂಡಲೇ ಮುಖ್ಯಮಂತ್ರಿಗಳ ಮನವೊಲಿಸಿ ನೆರೆ ಪೀಡಿತ ಪ್ರದೇಶಗಳಲ್ಲಿ ಹಸಿರು ಬರ ಘೋಷಣೆ ಮಾಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಜನ ನಿಮಗೆ ಅಧಿಕಾರ ಕೊಟ್ಟಿರೋದು ಬರೀ ರಾಜಕಾರಣ ಮಾಡೋದಕ್ಕೆ ಅಲ್ಲ. ಆರ್ ಎಸ್ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ’ ಎಂದವರು ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ.

Leave a Reply

Your email address will not be published. Required fields are marked *