ಪಹಲ್ಗಮ್ ದಾಳಿ: ಗುಪ್ತಚರ ಮಾಹಿತಿಯ ವೈಫಲ್ಯ ಎಂದ ಸಿದ್ದರಾಮಯ್ಯ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
<blockquote class=”twitter-tweet” data-media-max-width=”560″><p lang=”kn” dir=”ltr”>ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ… <a href=”https://t.co/KuRmMStw9X”>pic.twitter.com/KuRmMStw9X</a></p>— Siddaramaiah (@siddaramaiah) <a href=”https://twitter.com/siddaramaiah/status/1914984238887407979?ref_src=twsrc%5Etfw”>April 23, 2025</a></blockquote> <script async src=”https://platform.twitter.com/widgets.js” charset=”utf-8″></script>
ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದು ಸಿಎಂ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದವರು ಹೇಳಿದ್ದಾರೆ.
