ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಿ; ಸಿಎಂಗೆ ಮೇಲ್ಮನೆ ವಿಪಕ್ಷ ನಾಯಕರ ಆಗ್ರಹ

ಬೆಂಗಳೂರು: ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಪಾದಿಸಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ಪ್ರಕರಣದ ಸಂಬಂಧ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಮಗ ಪಂಪನಗೌಡ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಛಲವಾದಿ ನಾರಾಯಣಸ್ವಾಮಿ, ಸರ್ಕಾರ ಈ ಹಿಂದೆ ಕೊಟ್ಟಿದ್ದ ಆಶ್ವಾಸನೆಯಂತೆ 50 ಲಕ್ಷ ರೂ. ಪರಿಹಾರ ಒದಗಿಸಬೇಕೆಂದು ಆಹ್ರಹಿಸಿದ್ದಾರೆ.

ಪರಶುರಾಮ್ ಅವರ ಸ್ವಗ್ರಾಮಕ್ಕೆ ಆ.8ರಂದು ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭದಲ್ಲಿ ಪಿಎಸ್‌ಐ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹಾಗೂ ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿದ್ದರು. ಈ ಆಶ್ವಾಸನೆ ಈಡೇರಬೇಕಿದೆ ಎಂದು ಸರ್ಕಾರಕ್ಕೆ ನೆನಪಿಸಿದ್ದಾರೆ.

You may have missed