‘ಪುಷ್ಪ-2: ದಿ ರೂಲ್’ ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್ ಬಂಧನ

0
Allu-Arjun-Movie-Pushpa-2-300x164

ಹೈದರಾಬಾದ್: ‘ಪುಷ್ಪ-2: ದಿ ರೂಲ್’ ಚಿತ್ರದ ಗೆಲುವಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಇದೀಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ-2: ದಿ ರೂಲ್’ ಚಿತ್ರ ಪ್ರದರ್ಶನ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಈ ಡಿಸೆಂಬರ್ 4ರಂದು ಸಂಭವಿಸಿದ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಪ್ರಕರಣ ದಾಖಲಿಸಿರುವ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿ ನಾಂಪಲ್ಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಅಲ್ಲು ಅರ್ಜುನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *

You may have missed