ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

0
Pralhad-Joshi-1-300x203-2

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಅವರಿಂದ ತೆರವಾದ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ವಹಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಈ ಆದೇಶ ಹೊರಡಿಸಿದ್ದು, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಪ್ರಲ್ಹಾದ್ ಜೋಶಿ ನಿರ್ವಹಿಸಲಿದ್ದಾರೆ.

ಪ್ರಸ್ತುತ ಕೇಂದ್ರದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಆಗಿರುವ ಪ್ರಲ್ಹಾದ್ ಜೋಶಿ, ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇದರ ಜೊತೆಗೆ ಅವರು ಅಂತರರಾಷ್ಟ್ರೀಯ ಸೌರ ಒಕ್ಕೂಟ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಅವರು ತಮ್ಮ ಈಗಿನ ಸಚಿವಾಲಯಗಳ ಜೊತೆಗೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ.

ರಾಷ್ಟ್ರಪತಿ ಭವನದಿಂದ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ, ಪ್ರಧಾನಿ ಶಿಫಾರಸಿನ ಮೇರೆಗೆ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ ಎಂದು ದೃಢಪಡಿಸಲಾಗಿದೆ.

Leave a Reply

Your email address will not be published. Required fields are marked *

You may have missed