ಪ್ರಯಾಗ್ರಾಜ್: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ
ಪ್ರಯಾಗ್ರಾಜ್: ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ರಾಜ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸಿಲಿಂಡರ್ಗಳು ಸ್ಫೋಟಗೊಂಡು ಭಾರೀ ಅನಾಹುತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿವೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್ಗಳು ಬೆಂಕಿಯಾ ಕೆನ್ನಾಲಿಗೆಗೆ ಭಸ್ಮವಾಗಿವೆ. ಟೆಂಟ್ಗಳಲ್ಲಿ ಇಡಲಾಗಿದ್ದ ಸಿಲಿಂಡರ್ಗಳು ಒಂದೊಂದಾಗಿ ಸ್ಫೋಟಗೊಂಡಿದ್ದರಿಂದಾಗಿ ಬೆಂಕಿ ತೀವ್ರತೆ ಹೆಚ್ಚಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.