DALI DHANANJAY

ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ.

ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ.

ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ.

ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನಮಗಾಗಿ ಕೆಲಸಕ್ಕೆ ನಿಂತ ಪ್ರೊಡಕ್ಷನ್ ಮ್ಯಾನೇಜರ್ಸ್ ತಂಡಕ್ಕೆ, ಒಟ್ಟಾಗಿ ನನ್ನ ಚಿತ್ರರಂಗದ ಕುಟುಂಬಕ್ಕೆ ಹೃಯಪೂರ್ವಕ ನಮನಗಳು ಎಂದಿರುವ ಡಾಲಿ ಧನಂಜಯ, ಮದುವೆಯ ಮೆರಗು ಹೆಚ್ಚಿಸಿದ ಪ್ರೀತಿಯ ಅಭಿಮಾನಿಗಳಿಗೆ special thanks ಎಂದಿದ್ದಾರೆ.

Leave a Reply

Your email address will not be published. Required fields are marked *

You may have missed