ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

0
Police-Crime-Arreat-300x183

ಬಳ್ಳಾರಿ: ಮೂವರು ಪುಟ್ಟ ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹೊಸೂರು ಚಂಪಾ ಗ್ರಾಮದ ಸಿದ್ದವ್ವ ಎಂದು ಗುರುತಿಸಲಾಗಿದೆ. ಮಂಗಳವಾರದಿಂದಲೂ ಸಿದ್ದವ್ವ ಮತ್ತು ಮಕ್ಕಳ ಕುರುಹು ಸಿಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು.

ಬುಧವಾರ ಬೆಳಿಗ್ಗೆ ದಮ್ಮೂರಿನ ಸಮೀಪದ ಕೃಷಿ ಹೊಂಡದಲ್ಲಿ ಸಿದ್ದವ್ವ ಹಾಗೂ ಮಕ್ಕಳ ಮೃತದೇಹಗಳು ಕಂಡುಬಂದಿದ್ದು, ಗ್ರಾಮಸ್ಥರು ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಹಿಂದೆ ಕಾರಣ ಇನ್ನೂ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *