ಬಾಲಕಿ ಮೇಲೆ ಅತ್ಯಾಚಾರ; ಎನ್ಕೌಂಟರ್‌ನಲ್ಲಿ ಆರೋಪಿ ಸೆರೆ

ಲಖ್ನೋ: ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಪೊಲೀಸರು ಗುಂಡಿನ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿರುವ ಘಟನೆ ಉತ್ತರ ಪ್ರದೇಶದ ರಾಂಪುರ ಬಳಿ ನಡೆದಿದೆ.
11 ವರ್ಷದ ವಾಕ್ ಮತ್ತು ಶ್ರವಣದೋಷವುಳ್ಳ ಬಾಲಕಿ ಏಪ್ರಿಲ್ 15ರ ಸಂಜೆಯಿಂದ ನಾಪತ್ತೆಯಾಗಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಹೊಲವೊಂದರಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಪತ್ತೆಯಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದರು. ಪೊಲೀಸರು ಕಾಲಿಗೆ ಗುಂಡೇಟು ಹೊಡೆದು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.