ಬೆಂಗಳೂರಿನಲ್ಲಿ ನ.16ರಿಂದ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್

0
Bengaluru-All-India-Police-Lawn-Tennis-Championship-2026

ಬೆಂಗಳೂರು: 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌ಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ನವೆಂಬರ್ 16ರಿಂದ 21ರವರೆಗೆ ನಡೆಯಲಿರುವ ಈ ಕ್ರೀಡಾಕೂಟದ ಲೋಗೋವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸಿದರು.

ಕರ್ನಾಟಕ ರಾಜ್ಯ ಪೊಲೀಸ್ ಆತಿಥ್ಯದಲ್ಲಿ ನಡೆಯಲಿರುವ ಈ ಚಾಂಪಿಯನ್‌ಶಿಪ್‌ನಲ್ಲಿ ದೇಶದ 17 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶ, ಆರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಹಾಗೂ ಮೂರು ಕೇಂದ್ರ ಪೊಲೀಸ್ ಸಂಸ್ಥೆಗಳನ್ನು ಪ್ರತಿನಿಧಿಸುವ 180 ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಬೆಂಗಳೂರಿನ ಕರ್ನಾಟಕ ಸ್ಟೇಟ್ ಲಾನ್ ಟೆನಿಸ್ ಅಸೋಸಿಯೇಷನ್ (KSLTA) ಹಾಗೂ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳು ನಡೆಯಲಿವೆ.

ದೇಶದ ವಿವಿಧ ರಾಜ್ಯಗಳು ಮತ್ತು ಪೊಲೀಸ್ ಪಡೆಗಳ ಹಿರಿಯ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ. ಇಂತಹ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಕರ್ನಾಟಕ ಆತಿಥ್ಯ ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Leave a Reply

Your email address will not be published. Required fields are marked *