ಬೆಲೆ ಏರಿಕೆ ಮೂಲಕ ಲೂಟಿ? ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

0
bjp- congress Flag

ಬೆಂಗಳೂರು: ಕಾಂಗ್ರೆಸ್ ಚುನಾವಣೆಗೆ ಮುನ್ನ ಬೆಲೆ ಏರಿಕೆ ಮಾಡಲ್ಲ, ಐದು ಗ್ಯಾರಂಟಿ ಕೊಡುತ್ತೇವೆ ಎಂದಿತ್ತು. ಆದರೆ ಎರಡು ವರ್ಷಗಳಲ್ಲಿ ಹಾಲಿನ ದರ ಮೂರು ಬಾರಿ ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ 136 ಜನ ಕಳ್ಳರು ಇದ್ದಾರೆ. ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ. ಅದಕ್ಕಾಗಿ ಬೆಲೆ ಏರಿಕೆ ಮೂಲಕ ಲೂಟಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಜೆಟ್ ನಲ್ಲಿ ಯಾವುದೇ ತೆರಿಗೆ ತೋರಿಸದೆ ಇದೀಗ ಬೆಲೆ ಏರಿಕೆ ಮಾಡಲಾಗ್ತಿದೆ. ಐದು ಗ್ಯಾರಂಟಿಗಾಗಿ ಕರ್ನಾಟಕದ ಮನೆ ಮನೆ ಲೂಟಿ ಆಗ್ತಿದೆ ಎಂದು ಆರೋಪಿಸಿದರು.
ಸಚಿವರು ಅಂಗಡಿ ತೆರೆದಿದ್ದಾರೆ. 40% ಆರೋಪಕ್ಕೆ ಸಾಕ್ಷಿ ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್ ನಲ್ಲಿ 15,000 ಹಗರಣ ನಡೆದಿದೆ. ಸಿದ್ದರಾಮಯ್ಯ ಹೆಸರಿಗಷ್ಟೇ ಸಿಎಂ. ಸರ್ಕಾರದ ಗಾಲಿ ಕುರ್ಚಿಯಲ್ಲಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ತನ್ನ ಓಲೈಕೆ ರಾಜಕಾರಣಕ್ಕಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಯಾವ ಜಮೀನನ್ನು ಬೇಕಾದರೂ ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಣೆ ಮಾಡಿಕೊಳ್ಳುವ ಅವಕಾಶ ಕೊಟ್ಟಿತ್ತು. ಇದರಿಂದ ರೈತರ ಜಮೀನು, ದೇವಸ್ಥಾನ, ಮಠ-ಮಂದಿರಗಳ ಆಸ್ತಿ ಎಲ್ಲ ಕಬಳಿಕೆ ಆಗುತ್ತಿತ್ತು. ಈಗ ಎನ್ ಡಿಎ ಸರ್ಕಾರ ತಂದಿರುವ ತಿದ್ದುಪಡಿಯಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಮಠ ಮಾನ್ಯಗಳ ಜಮೀನು ಸುರಕ್ಷಿತವಾಗಿ ಉಳಿಯಲಿದೆ. ಇದಕ್ಕಾಗಿ ಪ್ರಧಾನಮಂತ್ರಿಗಳಿಗೆ, ಕೇಂದ್ರ ಗೃಹ ಸಚಿವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Leave a Reply

Your email address will not be published. Required fields are marked *

You may have missed