‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

0
MLA Chandru Lamani 2

ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ‌ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು ಎಂದಿದ್ದಾರೆ.

ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ. ನಾವ್ಯಾರು ಅದಕ್ಕೆ ಅಡ್ಡಿಮಾಡಲ್ಲ ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed